Tunganews

ಗಂಗಾವತಿ ತಾಲ್ಲೂಕಿನ ಗ್ರಾ.ಪಂ. ಚುನಾವಣಾ ಕ್ಷೇತ್ರಗಳ ವಿಭಜನೆ ಹಾಗೂ ಮೀಸಲಾತಿ ಪ್ರಕಟ: ಜಿಲ್ಲಾಧಿಕಾರಿ ಆದೇಶ

ಗಂಗಾವತಿ ತಾಲ್ಲೂಕಿನ ಗ್ರಾ.ಪಂ. ಚುನಾವಣಾ ಕ್ಷೇತ್ರಗಳ ವಿಭಜನೆ ಹಾಗೂ ಮೀಸಲಾತಿ ಪ್ರಕಟ: ಜಿಲ್ಲಾಧಿಕಾರಿ ಆದೇಶ

ತುಂಗಾವಾಣಿ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳ ಸಾರ್ವಜನಿಕ ಚುನಾವಣೆ ಸಂಬಂಧ, ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವಿಭಜನೆ ಹಾಗೂ ಸದಸ್ಯ ಸ್ಥಾನಗಳ ಮೀಸಲಾತಿಯನ್ನು ನಿಗದಿಪಡಿಸಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ 5ನೇ ಪ್ರಕರಣದ ಉಪ ಪ್ರಕರಣ (5) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿಗಳು ಈ ಮಹತ್ವದ ಕ್ರಮ ಕೈಗೊಂಡಿದ್ದಾರೆ.
 
ಕ್ಷೇತ್ರಗಳ ವಿಭಜನೆ (ಕೋಷ್ಠಕ-1):
ಗಂಗಾವತಿ ತಾಲ್ಲೂಕಿನ ಒಳಪಡುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಾಗಿ ವಿಂಗಡಿಸಲಾಗಿದೆ. ಇದರನ್ವಯ ಕೋಷ್ಠಕ-1 ರ ಅಂಕಣ (1) ರಲ್ಲಿ ಕ್ಷೇತ್ರದ ಸಂಖ್ಯೆ, ಅಂಕಣ (2) ರಲ್ಲಿ ಪ್ರತಿ ಕ್ಷೇತ್ರದ ಹೆಸರು, ಅಂಕಣ (3) ರಲ್ಲಿ ಕ್ಷೇತ್ರದ ವ್ಯಾಪ್ತಿ ಹಾಗೂ ಅಂಕಣ (4) ರಲ್ಲಿ ಆಯಾ ಕ್ಷೇತ್ರಕ್ಕೆ ಹಂಚಿಕೆ ಮಾಡಲಾದ ಒಟ್ಟು ಸದಸ್ಯ ಸ್ಥಾನಗಳ ಸಂಖ್ಯೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

 ಸ್ಥಾನಗಳ ಮೀಸಲಾತಿ ನಿಗದಿ (ಕೋಷ್ಠಕ-2): ಚುನಾವಣಾ ಕ್ಷೇತ್ರಗಳಿಗೆ ವಿವಿಧ ವರ್ಗಗಳ ಅಡಿಯಲ್ಲಿ ಸ್ಥಾನಗಳನ್ನು ಕಾಯ್ದಿರಿಸಲಾಗಿದ್ದು, ಕೋಷ್ಠಕ-2 ರ ಅಂಕಣ (2) ರಲ್ಲಿ ನಮೂದಿಸಲಾದ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಗೆ ಅಂಕಣ (4) ರಲ್ಲಿ ಸೂಚಿಸಿರುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳಾ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ.

 ಗ್ರಾಮೀಣ ಭಾಗದ ಮತದಾರರು ಹಾಗೂ ಮುಂಬರುವ ಪಂಚಾಯತಿ ಚುನಾವಣೆಯ ಆಕಾಂಕ್ಷಿಗಳು ತಮ್ಮ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಷೇತ್ರ ವಿಭಜನೆ ಮತ್ತು ಮೀಸಲಾತಿಯ ಸಂಪೂರ್ಣ ವಿವರಗಳನ್ನು ಆಯಾ ತಹಶೀಲ್ದಾರ್ ಕಚೇರಿ ಅಥವಾ ಗ್ರಾಮ ಪಂಚಾಯಿತಿಗಳ ಸೂಚನಾ ಫಲಕಗಳಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize