Tunganews

ಕೊಪ್ಪಳ ಸಚಿವಗಿರಿ ಕಸರತ್ತು: ಮೂವರ ನಡುವೆ ರೇಸ್, ತಂಗಡಗಿಗೆ ಪಟ್ಟ!?

ಕೊಪ್ಪಳ ಸಚಿವಗಿರಿ ಕಸರತ್ತು: ಮೂವರ ನಡುವೆ ರೇಸ್, ತಂಗಡಗಿಗೆ ಪಟ್ಟ!?

ತುಂಗಾವಾಣಿ.
ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಜಿಲ್ಲೆಯ ಸಚಿವ ಸ್ಥಾನದ ಹಂಚಿಕೆ ಕೌತುಕ ಮೂಡಿಸಿದ್ದು, ಜಿಲ್ಲೆಯ ಕಾಂಗ್ರೆಸ್ ಮುಖಂಡರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಬಾರಿ ಕೊಪ್ಪಳ ಜಿಲ್ಲೆಗೆ ಸಮಾಜ ಕಲ್ಯಾಣ ಇಲಾಖೆ ಸಿಗುವ ಮುನ್ಸೂಚನೆ ಇದೆ, ಸಚಿವ ಸ್ಥಾನಕ್ಕಾಗಿ ಕೊಪ್ಪಳ ಜಿಲ್ಲೆಯ ಮೂವರು ಘಟಾನುಘಟಿ ನಾಯಕರ ನಡುವೆ ತೆರೆಮರೆಯ ಕಸರತ್ತು ಜೋರಾಗಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಲೆಕ್ಕಾಚಾರಗಳ ಸೂತ್ರ: ಬಣ ರಾಜಕೀಯ ಮತ್ತು ಸಮುದಾಯ ಸಮೀಕರಣ
ಹಿರಿಯತನಕ್ಕೆ ಉಪ ಸಭಾಪತಿ ಗೌರವ?
ಮಾಜಿ ಸಚಿವ, ಚಾಣಾಕ್ಷ ನಾಯಕ ಬಸವರಾಜ್ ರಾಯರೆಡ್ಡಿ ಅವರಿಗೆ ಸೀನಿಯಾರಿಟಿ ಆಧಾರದಲ್ಲಿ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯವಿದೆ. ಆದರೆ, ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿರುವ ಇವರಿಗೆ 'ವಿಧಾನಸಭೆ ಉಪ ಸಭಾಪತಿ' ಸ್ಥಾನ ನೀಡಿ ಗೌರವಯುತವಾಗಿ ಸಮಾಧಾನಪಡಿಸುವ ತಂತ್ರಗಾರಿಕೆಗೆ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ.

ಹಿಟ್ನಾಳಗೆ ಕೆಎಂಎಫ್ ಅಧ್ಯಕ್ಷ ಪಟ್ಟ?
ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಘವೇಂದ್ರ ಹಿಟ್ನಾಳ ತಮ್ಮ ಹ್ಯಾಟ್ರಿಕ್ ಗೆಲುವಿನ ಬಲದೊಂದಿಗೆ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀರಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರೂ, ಕುರುಬ ಸಮುದಾಯಕ್ಕೆ ಈಗಾಗಲೇ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿರುವುದರಿಂದ ಇವರಿಗೆ ಸಚಿವಸ್ಥಾನ ಕೈತಪ್ಪುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಇವರನ್ನು ತಣ್ಣಗಾಗಿಸಲು 'ಕರ್ನಾಟಕ ಹಾಲು ಮಹಾಮಂಡಳ' (KMF) ಅಧ್ಯಕ್ಷ ಸ್ಥಾನ ನೀಡಲು ಮುಖಂಡರು ಮುಂದಾಗಿದ್ದಾರೆ.

ತಂಗಡಗಿಗೆ ಜಾತಿ ಕಾರ್ಡ್ & 'ನ್ಯೂಟ್ರಲ್' ಗೇಮ್ ಪ್ಲಸ್!?
ಬೋವಿ ಸಮುದಾಯದ ಏಕೈಕ ಶಾಸಕರಾಗಿರುವ ಶಿವರಾಜ್ ತಂಗಡಗಿ ಅವರ ಹಾದಿ ಸುಗಮವಾಗಿದೆ. ಗೆದ್ದಾಗಲೆಲ್ಲಾ ಮಂತ್ರಿಯಾಗುವ ರಾಜಕೀಯ ಲಕ್ ಹೊಂದಿರುವ ತಂಗಡಗಿ, ರಾಜ್ಯ ಕಾಂಗ್ರೆಸ್‌ನ ಪ್ರಮುಖ ಧುರೀಣರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೊಂದಿಗೂ ಸಮಾನ ಅಂತರ ಕಾಯ್ದುಕೊಂಡು ತಟಸ್ಥ ಆಟವಾಡುತ್ತಿದ್ದಾರೆ. ಜಾತಿ ಸಮೀಕರಣ ಮತ್ತು ತಟಸ್ಥ ರಾಜಕಾರಣ ಇವರ ಪಾಲಿಗೆ ಪ್ಲಸ್ ಪಾಯಿಂಟ್ ಆಗಿದೆ.

 ಮೂವರನ್ನೂ ಸರಿದೂಗಿಸಿ ಬಂಡಾಯ ಶಮನಕ್ಕೆ ಹೈಕಮಾಂಡ್ ಸೂತ್ರ,
ರಾಯರೆಡ್ಡಿಗೆ ಉಪ ಸಭಾಪತಿ, ಹಿಟ್ನಾಳಗೆ ಕೆಎಂಎಫ್ ಪಟ್ಟ
ಜಾತಿವಾರು ಲೆಕ್ಕಾಚಾರದಲ್ಲಿ ತಂಗಡಗಿಗೆ ಸಚಿವಗಿರಿ ಖಚಿತ ಲಕ್ಷಣ?
ಒಟ್ಟಾರೆ ಚಿತ್ರಣ:
ಜಿಲ್ಲೆಯ ಮೂವರನ್ನೂ ಒಟ್ಟಿಗೆ ಸಂತೈಸುವ ಮಾಸ್ಟರ್ ಪ್ಲಾನ್ ಹೈಕಮಾಂಡ್ ಅಂಗಳದಲ್ಲಿ ಸಿದ್ಧವಾಗಿದ್ದು, ಅಂತಿಮವಾಗಿ ಶಿವರಾಜ್ ತಂಗಡಗಿ ಮತ್ತೊಮ್ಮೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತ ಎಂಬ ಮಾತುಗಳು ಕೈ ಅಂಗಳದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize