Tunganews

ಕೊಪ್ಪಳ: ಹಿಟ್ನಾಳ್‌ಗೆ ತಪ್ಪಿದ ಮಂತ್ರಿಗಿರಿ: ಅಶೋಕ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ,!

ಕೊಪ್ಪಳ: ಹಿಟ್ನಾಳ್‌ಗೆ ತಪ್ಪಿದ ಮಂತ್ರಿಗಿರಿ: ಅಶೋಕ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ,!

ತುಂಗಾವಾಣಿ.
ಕೊಪ್ಪಳ: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಹಂಚಿಕೆಯ ಬೆನ್ನಲ್ಲೇ ಕೊಪ್ಪಳ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ ಹೊತ್ತಿ ಉರಿದಿದೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ನಗರದ ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಉಗ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶೋಕ ವೃತ್ತದಲ್ಲಿ ಟಯರ್‌ಗೆ ಬೆಂಕಿ: 
ಸಚಿವ ಸ್ಥಾನ ಸಿಗದೇ ಇರುವುದರಿಂದ ತೀವ್ರ ಅಸಮಾಧಾನಗೊಂಡ ನೂರಾರು ಬೆಂಬಲಿಗರು ನಗರದ ಪ್ರಮುಖ ರಸ್ತೆಯಾದ ಅಶೋಕ ವೃತ್ತಕ್ಕೆ ಜಮಾಯಿಸಿ, ರಸ್ತೆ ತಡೆ ನಡೆಸಿದರು. ನಡುರಸ್ತೆಯಲ್ಲೇ ಟಯರ್‌ಗಳಿಗೆ ಬೆಂಕಿ ಹಚ್ಚಿ ಹೊಗೆಯೆಬ್ಬಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೆಲ ಅಭಿಮಾನಿಗಳು "ಮೂರು ಬಾರಿ ಗೆದ್ದ ಶಾಸಕರಿಗೆ ಅನ್ಯಾಯವಾಗಿದೆ" ಎಂದು ಲಬೋ ಲಬೋ ಎಂದು ಬಾಯಿ ಬಡೆದುಕೊಂಡು ತಮ್ಮ ಆಕ್ರೋಶ ಹಾಗೂ ನಿರಾಸೆಯನ್ನು ಹೊರಹಾಕಿದ ಸನ್ನಿವೇಶ ಕಂಡುಬಂತು.

ರಾಜ್ಯ ನಾಯಕರ ವಿರುದ್ಧ ಸಿಡಿದ ಬೆಂಬಲಿಗರು
ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿ.ಎಮ್. ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದಿಕ್ಕಾರದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

 "ಸತತ 3 ಬಾರಿ ಗೆದ್ದ ಹಿಟ್ನಾಳ್‌ಗೆ ಸಚಿವ ಸ್ಥಾನ ನೀಡಲೇಬೇಕು!"
"ನಿಷ್ಠಾವಂತ ಶಾಸಕರಿಗೆ ಅನ್ಯಾಯವೆಸಗಿದ ಹೈಕಮಾಂಡ್‌ಗೆ ದಿಕ್ಕಾರ!"
ಎಂದು ಘೋಷಣೆ ಕೂಗಿದ ಬೆಂಬಲಿಗರು, ತಕ್ಷಣವೇ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ ಸಚಿವ ಸ್ಥಾನ ಹಂಚಿಕೆಯು ಕಾಂಗ್ರೆಸ್‌ನಲ್ಲಿ ಭಿನ್ನಮತವನ್ನು ಸ್ಫೋಟಿಸಿದ್ದು, ಹಿಟ್ನಾಳ್ ಬೆಂಬಲಿಗರ ಪ್ರತಿಭಟನೆಯಿಂದಾಗಿ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize