Tunganews

ಗಂಗಾವತಿ ನಗರದ ನಿವೇಶನ ರಹಿತರಿಗೆ ಸಿಹಿಸುದ್ದಿ: ಸರ್ಕಾರಿ ಭೂಮಿಯಲ್ಲಿ ಹಂಚಿಕೆಗೆ ಸಿದ್ದತೆ!

Aug 31, 2026, 10:02 PM IST
ಗಂಗಾವತಿ ನಗರದ ನಿವೇಶನ ರಹಿತರಿಗೆ ಸಿಹಿಸುದ್ದಿ:   ಸರ್ಕಾರಿ ಭೂಮಿಯಲ್ಲಿ ಹಂಚಿಕೆಗೆ ಸಿದ್ದತೆ!

ತುಂಗಾವಾಣಿ.
ಗಂಗಾವತಿ: ಸ್ವಂತ ಸೂರು ಕಾಣಬೇಕೆಂಬ ಕನಸು ಹೊತ್ತು ನಗರಸಭೆಗೆ ಅರ್ಜಿ ಸಲ್ಲಿಸಿ ವರ್ಷಗಳಿಂದ ಕಾಯುತ್ತಿದ್ದ ಗಂಗಾವತಿಯ ಸಾವಿರಾರು ಬಡ ಕುಟುಂಬಗಳ ಮೊಗದಲ್ಲಿ ಕೊನೆಗೂ ಮಂದಹಾಸ ಮೂಡುವ ಕಾಲ ಕೂಡಿಬಂದಿದೆ. ನಗರ ವ್ಯಾಪ್ತಿಯಲ್ಲಿ ವಾಸಿಸುವ ನಿವೇಶನ ರಹಿತ ಬಡವರಿಗೆ ಸರ್ಕಾರಿ ಜಮೀನು ಗುರುತಿಸಿ ಸೂರು ಕಲ್ಪಿಸುವ ಮಹತ್ವದ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದ್ದು, ಯೋಜನೆಗೆ ಅಧಿಕೃತ ಚಾಲನೆ ದೊರೆತಿದೆ.
300ಕ್ಕೂ ಹೆಚ್ಚು ಎಕರೆ ಸರ್ಕಾರಿ ಭೂಮಿ ಗುರುತು
ನಗರದ ಸಮೀಪದ ಸರ್ವೆ ನಂಬರ್ 207ರಲ್ಲಿ ಸರ್ಕಾರದ ಸುಮಾರು 300ಕ್ಕೂ ಅಧಿಕ ಎಕರೆ ಜಮೀನು ಲಭ್ಯವಿದ್ದು, ಇದರಲ್ಲಿ ವಸತಿ ರಹಿತರಿಗೆ ವ್ಯವಸ್ಥಿತವಾಗಿ ಬಡಾವಣೆ ನಿರ್ಮಿಸಿ ಜಾಗ ನೀಡಲು ಆಡಳಿತ ಸಿದ್ಧತೆ ನಡೆಸಿದೆ. 

ಈ ಹಿನ್ನೆಲೆಯಲ್ಲಿ ಗಂಗಾವತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಸ್ತುತ ನಗರಸಭೆ ಪ್ರಭಾರಿ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ರಾಮರೆಡ್ಡಿ ಪಾಟೀಲ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿತು.

ಸ್ಥಳ ಪರಿಶೀಲನೆ ವೇಳೆ ಗಂಗಾವತಿ ಹೋಬಳಿಯ ಕಂದಾಯ ಅಧಿಕಾರಿ (ಆರ್‌ಐ) ಮಹೇಶ ದಲಾಲ್, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ನಗರಸಭೆಯ ಪ್ರಮುಖ ಸಿಬ್ಬಂದಿ ಉಪಸ್ಥಿತರಿದ್ದು, ಜಮೀನಿನ ವ್ಯಾಪ್ತಿ, ರಸ್ತೆ ಸಂಪರ್ಕ ಹಾಗೂ ಮೂಲಸೌಕರ್ಯ ಕಲ್ಪಿಸುವ ಸಾಧ್ಯತೆಗಳ ಬಗ್ಗೆ ತಾಂತ್ರಿಕ ಅಧ್ಯಯನ ನಡೆಸಿದರು. ಜಮೀನಿನ ಸದ್ಯದ ಸ್ಥಿತಿಗತಿ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಸೂಕ್ತ ಕ್ರಮಕ್ಕಾಗಿ ಶೀಘ್ರವೇ ಶಿಫಾರಸು ಮಾಡಲಾಗುವುದು ಎಂದು ತುಂಗಾವಾಣಿ ಪತ್ರಿಕೆಗೆ ತಿಳಿಸಿದ್ದಾರೆ.

ನಿವೇಶನದ ಅಳತೆ ಮತ್ತು ವಿತರಣಾ ಮಾನದಂಡ
ಯೋಜನೆಯ ನಿಯಮಾವಳಿಗಳ ಪ್ರಕಾರ ನಿವೇಶನ ಹಂಚಿಕೆಗೆ ಮಾನದಂಡ ನಿಗದಿಪಡಿಸಲಾಗಿದೆ:

ನಗರಸಭೆ ವ್ಯಾಪ್ತಿ: ನಗರ ಪ್ರದೇಶದಲ್ಲಿ ಜಾಗದ ಕೊರತೆ ಇರುವುದರಿಂದ ಅರ್ಹ ಫಲಾನುಭವಿಗಳಿಗೆ 20×30 ಅಳತೆಯ ನಿವೇಶನ ಹಂಚಿಕೆಗೆ ಸಿದ್ದತೆ.

ಗ್ರಾಮೀಣ ಭಾಗ: ಗ್ರಾಮೀಣ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ 30×40 ಅಳತೆಯ ನಿವೇಶನ ವಿತರಣೆಗೆ ಸಿದ್ದತೆ.

"ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹರನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ, ಅಳೆದು ತೂಗಿ ಪಾರದರ್ಶಕವಾಗಿ ನೇರವಾಗಿ ಫಲಾನುಭವಿಗಳ ಕೈಗೇ ಹಕ್ಕುಪತ್ರ ತಲುಪಿಸಲು ಆಡಳಿತ ಬದ್ಧವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿಗೆ ಅವಕಾಶವಿಲ್ಲ."

 — ರಾಮರೆಡ್ಡಿ ಪಾಟೀಲ್, ಪೌರಾಯುಕ್ತರು, ನಗರಸಭೆ ಗಂಗಾವತಿ



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize