Tunganews

ಫ್ಲೆಕ್ಸ್ ಬ್ಯಾನರ್ ಗಳಲ್ಲಿ ಅನ್ಸಾರಿ "ಕೈ" ಬಿಟ್ಟ ನೂತನ ಜಿಲ್ಲಾಧ್ಯಕ್ಷ.

ಫ್ಲೆಕ್ಸ್ ಬ್ಯಾನರ್ ಗಳಲ್ಲಿ ಅನ್ಸಾರಿ "ಕೈ" ಬಿಟ್ಟ ನೂತನ ಜಿಲ್ಲಾಧ್ಯಕ್ಷ.

ಕೊಪ್ಪಳ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಒಳಮುನಿಸು

ವಲಸಿಗರಿಗೆ ಮಣೆ, ಮೂಲ ನಾಯಕನಿಗೆ ಕೊಕ್?

ಷೋಕಾಸ್ ನೋಟಿಸ್ ಬೆನ್ನಲ್ಲೇ ಫ್ಲೆಕ್ಸ್ ವಾರ್

ತುಂಗಾವಾಣಿ. 
ಗಂಗಾವತಿ: ಕೊಪ್ಪಳ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಶುಭಾಶಯ ಕೋರಿ ಗಂಗಾವತಿ ನಗರದಾದ್ಯಂತ ಹಾಕಲಾಗಿರುವ ಬೃಹತ್ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳು ಈಗ ಜಿಲ್ಲಾ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿವೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ಇಕ್ಬಾಲ್ ಅನ್ಸಾರಿ ಅವರ ಭಾವಚಿತ್ರವನ್ನು ಈ ಅಭಿನಂದನಾ ಫ್ಲೆಕ್ಸ್‌ಗಳಿಂದ ಸಂಪೂರ್ಣವಾಗಿ ಕೈಬಿಟ್ಟಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತವನ್ನು ಮತ್ತೊಮ್ಮೆ ಬೀದಿಗೆ ತಂದಿದೆ.

ನಗರದ ಪ್ರಮುಖ ವೃತ್ತಗಳು, ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ರಸ್ತೆ ಹಾಗೂ ಚನ್ನಬಸವಸ್ವಾಮಿ ವೃತ್ತಗಳಲ್ಲಿ ನೂರಾರು ಬ್ಯಾನರ್‌ಗಳು ರಾರಾಜಿಸುತ್ತಿವೆ. ಈ ಫ್ಲೆಕ್ಸ್‌ಗಳಲ್ಲಿ ಕೊಪ್ಪಳ, ಯಲಬುರ್ಗಾ, ಕುಷ್ಟಗಿ ಮತ್ತು ಕನಕಗಿರಿ ಕ್ಷೇತ್ರಗಳ ಹಾಲಿ ಹಾಗೂ ಮಾಜಿ ಶಾಸಕರ ಫೋಟೊಗಳನ್ನು ಮುಂಚೂಣಿಯಲ್ಲಿ ಹಾಕಲಾಗಿದೆ. ಅಷ್ಟೇ ಅಲ್ಲದೆ, ಕಳೆದ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ವಲಸೆ ಬಂದ ಮಾಜಿ ಸಂಸದ ಕೆ. ಕರಡಿ ಸಂಗಣ್ಣ ಅವರ ಭಾವಚಿತ್ರಗಳಿಗೂ ಪ್ರಮುಖ ಸ್ಥಾನ ನೀಡಲಾಗಿದೆ. ಆದರೆ, ಗಂಗಾವತಿಯಲ್ಲಿ 63 ಸಾವಿರಕ್ಕೂ ಹೆಚ್ಚು ವೈಯಕ್ತಿಕ ಮತಬಲ ಹೊಂದಿರುವ ಪ್ರಭಾವಿ ನಾಯಕ ಇಕ್ಬಾಲ್ ಅನ್ಸಾರಿ ಅವರ ಫೋಟೊ ಒಂದೂ ಬ್ಯಾನರ್‌ನಲ್ಲೂ ಕಾಣಿಸದಿರುವುದು ಸ್ಥಳೀಯ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮತ್ತು ಗೊಂದಲಕ್ಕೆ ಕಾರಣವಾಗಿದೆ.

ಷೋಕಾಸ್ ನೋಟಿಸ್ ಎಫೆಕ್ಟ್?
ಇತ್ತೀಚೆಗಷ್ಟೇ ಪಕ್ಷವಿರೋಧಿ ಚಟುವಟಿಕೆಯ ಆರೋಪದಡಿ ಕೆಪಿಸಿಸಿ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು ಇಕ್ಬಾಲ್ ಅನ್ಸಾರಿ ಅವರಿಗೆ ಕಾರಣ ಕೇಳಿ ಷೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಈ ನೋಟಿಸ್ ನೀಡಿದ ಬೆನ್ನಲ್ಲೇ, ನೂತನ ಜಿಲ್ಲಾಧ್ಯಕ್ಷರ ಸ್ವಾಗತ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳಿಂದ ಅನ್ಸಾರಿಯವರನ್ನು ಉದ್ದೇಶಪೂರ್ವಕವಾಗಿಯೇ ಬದಿಗಿಡಲಾಗಿದೆಯೇ ಎಂಬ ಬಲವಾದ ಅನುಮಾನ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಒಗ್ಗಟ್ಟಿಗೆ  ಕಂಟಕದ ಮುನ್ಸೂಚನೆ:
ಕ್ಷೇತ್ರದಲ್ಲಿ ಪ್ರಬಲ ಹಿಡಿತ ಹೊಂದಿರುವ ಮಾಸ್ ಲೀಡರ್ ಒಬ್ಬರನ್ನು ಈ ರೀತಿ ಸಾರ್ವಜನಿಕವಾಗಿ ಕಡೆಗಣಿಸಿರುವುದು ಮುಂಬರುವ ದಿನಗಳಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರ ನಡುವಿನ ಶೀತಲ ಸಮರಕ್ಕೆ ಗಂಗಾವತಿಯ ಈ ‘ಫ್ಲೆಕ್ಸ್ ರಾಜಕಾರಣ’ ತುಪ್ಪ ಸುರಿದಂತಾಗಿದ್ದು, ಜಿಲ್ಲೆಯಲ್ಲಿ ಪಕ್ಷದ ಪೂರ್ಣ ಪ್ರಮಾಣದ ಸಂಘಟನೆ ಮತ್ತು ಒಗ್ಗಟ್ಟಿಗೆ ತೀವ್ರ ಪೆಟ್ಟು ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize