Tunganews

ದಸರಾ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

ದಸರಾ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

ತುಂಗಾವಾಣಿ.
ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಂಬಂಧಿಸಿದಂತೆ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಸರ್ಕಾರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಕೇವಲ ಕಪೋಲಕಲ್ಪಿತ ವದಂತಿಯಾಗಿದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಕೊಪ್ಪಳದ ಐತಿಹಾಸಿಕ ಶ್ರೀ ಗವಿಮಠದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸರ್ವಧರ್ಮ ಸಮನ್ವಯದ ಹರಿಕಾರ, ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದ್ದು, ಸರ್ಕಾರದ ಈ ನಿರ್ಧಾರಕ್ಕೆ ನಾಡಿನಾದ್ಯಂತ ಸಾರ್ವಜನಿಕರು ಹಾಗೂ ಸರ್ವಪಕ್ಷಗಳ ಮುಖಂಡರಿಂದ ಮುಕ್ತಕಂಠದ ಪ್ರಶಂಸೆ ವ್ಯಕ್ತವಾಗಿತ್ತು. ಇದಕ್ಕೆ ಪೂಜ್ಯ ಶ್ರೀಗಳು ಕೂಡ ಸಮ್ಮತಿಸಿದ್ದರು.

ಆದರೆ, ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ಶ್ರೀಗಳ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ವದಂತಿಯ ಸಂದೇಶಗಳನ್ನು ವ್ಯವಸ್ಥಿತವಾಗಿ ಹರಿಬಿಡುತ್ತಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ಆಹ್ವಾನ ನೀಡಲು ಬಂದಾಗ, ಬರೋಬ್ಬರಿ ಒಂದೂವರೆ ಗಂಟೆ ಮನವೊಲಿಸಿದರೂ ಶ್ರೀಗಳು ಒಪ್ಪಿಲ್ಲವೆಂದೂ, ಕೊಪ್ಪಳ ಜಿಲ್ಲೆಯನ್ನು ಕಲುಷಿತ ಕಾರ್ಖಾನೆಗಳಿಂದ ಮುಕ್ತಗೊಳಿಸಿದರೆ ಮಾತ್ರವೇ ದಸರಾ ಉದ್ಘಾಟನೆಗೆ ಬರುವುದಾಗಿ ಶ್ರೀಗಳು ಷರತ್ತು ವಿಧಿಸಿದ್ದಾರೆ ಎಂದೂ ತಿರುಚಿದ ಕಥೆಯನ್ನು ಹೆಣೆದು ವೈರಲ್ ಮಾಡಲಾಗಿತ್ತು. ಅಲ್ಲದೆ, ಶ್ರೀಗಳ ಈ ನಿರ್ಧಾರಕ್ಕೆ ರಾಜ್ಯವ್ಯಾಪಿ ಪ್ರಶಂಸೆ ವ್ಯಕ್ತವಾಗಿದೆ ಎಂದು ಬಿಂಬಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಲು ಯತ್ನಿಸಲಾಗಿತ್ತು.

ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಶ್ರೀ ಗವಿಮಠದ ಉನ್ನತ ಮೂಲಗಳು, “ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಂತಹ ಪೋಸ್ಟ್‌ಗಳು ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಆಧಾರರಹಿತವಾಗಿವೆ. ದಸರಾ ಆಹ್ವಾನ ತಿರಸ್ಕರಿಸಿದ್ದಾರೆ ಅಥವಾ ಯಾವುದೇ ರೀತಿಯ ಷರತ್ತು ವಿಧಿಸಿದ್ದಾರೆ ಎಂಬುದೆಲ್ಲ ಶುದ್ಧ ಸುಳ್ಳು. ಶ್ರೀಮಠಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ವಿಚಾರ ಅಥವಾ ಅಧಿಕೃತ ನಿಲುವುಗಳಿದ್ದರೂ ಅದನ್ನು ಮಠದ ಅಧಿಕೃತ ಪ್ರಕಟಣೆ ಮೂಲಕವೇ ತಿಳಿಸಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಇಂತಹ ಅನಾಮಧೇಯ ವದಂತಿಗಳಿಗೆ ಕಿವಿಗೊಡಬಾರದು” ಎಂದು ಸ್ಪಷ್ಟಪಡಿಸಿವೆ.

ಇನ್ನೊಂದೆಡೆ, ನಾಡಿನ ಪೂಜ್ಯ ಸಂತರು ಹಾಗೂ ಐತಿಹಾಸಿಕ ಶ್ರೀಮಠದ ಗೌರವಕ್ಕೆ ಧಕ್ಕೆ ತರುವ ದುರುದ್ದೇಶದಿಂದ ಇಂತಹ ಅಪಪ್ರಚಾರ ನಡೆಸುತ್ತಿರುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ವಲಯ ಹಾಗೂ ಭಕ್ತ ವೃಂದದಿಂದ ತೀವ್ರ ಆಕ್ರೋಶ ಮತ್ತು ಆಗ್ರಹ ವ್ಯಕ್ತವಾಗಿದೆ.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize