Tunganews

Mahan Kinds School

Mahan Kinds School

ಗಂಗಾವತಿ.ಡಿ.10: ಖಾಸಗಿ ಶಾಲೆಗಳೆಂದರೆ ಪಾಲಕರಿಂದ ದುಬಾರಿ ಫೀಜು ಪೀಕಿ, ಮಕ್ಕಳಿಗೆ ಕೇವಲ ಸಿದ್ದಪಠ್ಯ ಕ್ರಮಗಳನ್ನು ಬೋಧಿಸುವ ಕಾರ್ಖಾನೆಗಳಂತಾಗಿವೆ. ಆದರೆ ಇದಕ್ಕೆ ಅಪವಾದ ಎಂಬಂತೆ ಜಯನಗರದ ಮಾಹಾನ್ ಕಿಡ್ಸ್ ಶಾಲೆಯು ಮಕ್ಕಳ ಶೈಕ್ಷಣಿಕ ಪ್ರಗತಿಯ ಜತೆಗೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗಾಗಿ ವಿಶಿಷ್ಟವಾದ ಪಠ್ಯೇತರ ಚಟುವಟಿಕೆಗಳ ಮೂಲಕ ಪಾಲಕರ ಪ್ರಶಂಸೆಗೆ ಪಾತ್ರವಾಗಿದೆ.
ಶನಿವಾರದಂದು ಬೆಳಗ್ಗೆ ಮಹಾನ್ ಕಿಡ್ಸ್ ಶಾಲೆಯಲ್ಲಿ ಕಾಂಪ್ಲಿಮೆಂಟರಿ ಟೈಂ ವಿಶೇಷ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಗೆ ಹಾಗೂ ಪಾಲಕರಿಗಾಗಿ ಹಮ್ಮಿಕೊಳ್ಳಲಾಗಿತ್ತು. ನಿಜಕ್ಕೂ ಇದೊಂದು ಅತ್ಯುತ್ತಮ ವಿಶೇಷ ಕಾರ್ಯಕ್ರಮವಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಅಸ್ತಿತ್ವ, ಮಾನಸಿಕ ಯೋಚನೆಗಳನ್ನು ಹಾಗೂ ಅಂತರ್ ಶಕ್ತಿಯನ್ನು ಜಾಗೃತಗೊಳಿಸುವ ಕಾರ್ಯ ಮಾಡಲಾಯಿತು. ಇಂದಿನ ಆಧನಿಕ ಯುಗದ ಮಕ್ಕಳ ಮಾನಸಿಕ ಒತ್ತಡವನ್ನು ಪಾಲಕರು ಅರಿಯುವ ಬಗ್ಗೆ ಹಾಗೂ ಪಾಲಕರಲ್ಲಿನ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತಂತೆ ಸಾಕಷ್ಟು ಗೊಂದಲಗಳಿಗೆ ಪರಿಹಾರವನ್ನು ಶಾಲೆ ಮುಖ್ಯಸ್ಥ ನೇತ್ರಾಜ್ ಗುರುವಿನ ಮಠ ಅವರು ಬಹಳ ಸಮರ್ಪಕವಾಗಿ ನೀಡಿದರು.
ಇದೇ ವೇಳೆ ಮಕ್ಕಳು ಪಾಲಕರನ್ನು, ಪಾಲಕರು ಮಕ್ಕಳನ್ನು ಅರಿಯುವ ಕುರಿತು ಪ್ರಾಯೋಗಿಕವಾಗಿ ನಿರೂಪಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಶಾಲೆ ಮುಖ್ಯಸ್ಥ ನೇತ್ರಾಜ್ ಗುರುವಿನ ಮಠ ಅವರು, ನಿಮ್ಮ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ನೀವುಗಳು ಸಾಕಷ್ಟು ಶ್ರಮಿಸುತ್ತೀರಿ. ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವುದು ನಿಮ್ಮೆಲ್ಲರ ಕನಸು. ಹಾಗಾಗಿ ಅವರಿಗೆ ಎಲ್ಲಾ ಸೌಲಭ್ಯಗಳು ಕಲ್ಪಿಸಿ ಕೊಡುತ್ತೀರಿ. ಭೌತಿಕವಾಗಿ ಮೇಲ್ನೋಟಕ್ಕೆ ಮಕ್ಕಳು ಖುಷಿಯಾಗಿರುವಂತೆ ಕಾಣುತ್ತದೆ. ಆದರೆ ಆಂತರಿಕವಾಗಿ ಮಕ್ಕಳು ನಿಮ್ಮ ಪ್ರೀತಿಯ ಜತೆಗೆ ನಿಮ್ಮೊಂದಿಗೆ ಮುಕ್ತವಾಗಿ ಮಾತಾಡಲು ಬಯಸುತ್ತಾರೆ. ತಮ್ಮಲ್ಲಿನ ವಿಚಾರಗಳನ್ನು ನಿಮ್ಮೊಂದಿಗೆ ಚರ್ಚಿಸಲು ಬಯಸುತ್ತಾರೆ. ಅದಕ್ಕೆ ನಾವುಗಳು ಅವಕಾಶ ನೀಡಬೇಕು. ಮಕ್ಕಳು ತಪ್ಪು ಮಾಡಿದಾಗ ಗದರುವ ನಾವು. ಅವರು ಗೆದ್ದಾಗ ಮುಕ್ತವಾಗಿ ಹೊಗಳಿ ಹುರಿದುಂಬಿಸುವುದನ್ನು ಮರೆಯುತ್ತೇವೆ. ಮಕ್ಕಳಿಗಾಗಿ ಪ್ರತಿಯೊಬ್ಬ ಪಾಲಕರು ಪ್ರತಿದಿನ ಸಮಯ ಮೀಸಲಿಡಬೇಕು. ಅವರೊಂದಿಗೆ ಬೆರೆತು ಹಾಡಿ, ಕುಣಿದು ನಲಿಯಬೇಕು. ಇದರಿಂದ ನಮ್ಮ ಆಂತರಿಕ ಶಕ್ತಿ ಹೆಚ್ಚುವುದರ ಜತೆಗೆ ಮಕ್ಕಳ ಮಾನಸಿಕ ಸ್ಥಿತಿ ಸಮತೋಲನ ಸಾಧಿಸುತ್ತದೆ. ಇಂದಿನ ಮಕ್ಕಳು ಶೈಕ್ಷಣಿಕವಾಗಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದಾರೆ. ಆದರೆ ದೈಹಿಕವಾಗಿ ದಿನೆದಿನೇ ಕ್ಷೀಣಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಾಲಕರು ನಿಗಾವಹಿಸಬೇಕು ಎಂದರು.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize