ತುಂಗಾವಾಣಿ.
ಕೊಪ್ಪಳ: ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಾದಿಗ ದಂಡೋರ–ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಮಿತಿಯ ಜಿಲ್ಲಾಧ್ಯಕ್ಷ ಗಂಗಣ್ಣ ಸಿದ್ದಾಪುರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಸಂತ್ರಸ್ತ ಕುಟುಂಬಗಳಿಗೆ ತ್ವರಿತ ನ್ಯಾಯ ಒದಗಿಸಬೇಕು ಹಾಗೂ ಸೂಕ್ತ ರಕ್ಷಣೆ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತ ಪ್ರತಿ ಕುಟುಂಬಕ್ಕೆ ₹50 ಲಕ್ಷ ಪರಿಹಾರ, 5 ಎಕರೆ ಕೃಷಿ ಭೂಮಿ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಮೂರ್ತಿ ಸಂಗಾಪುರ, ನಿಂಗಪ್ಪ ಕಾಮನೂರು, ಮರಿಯಪ್ಪ ಭಂಡಾರಿ, ಶಿವಪ್ಪ ಈಳಿಗಿನೂರು, ಮಹಾದೇವ ಬಡಿಗೇರ್, ಹುಲಗಪ್ಪ ವೀರಾಪುರ, ಬಸವರಾಜ್, ಯಮನೂರಪ್ಪ ದೊಡ್ಮನಿ, ಹನುಮಂತಪ್ಪ ಈಳಿಗನೂರು, ರಮೇಶ್ ದೇವರಮನೆ ಹಾಗೂ ತಿಮ್ಮೇಶ್ ಎಂ. ಸೂಗೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.