Tunganews

ಕೊಪ್ಪಳ: ​14 ವರ್ಷಗಳ ಪ್ರೀತಿಗೆ ಕುಟುಂಬಸ್ಥರ ವಿರೋಧ: ಟಿಬಿ ಡ್ಯಾಂಗೆ ಹಾರಿ ಶಿಕ್ಷಕಿ ಆತ್ಮಹತ್ಯೆ!

ಕೊಪ್ಪಳ: ​14 ವರ್ಷಗಳ ಪ್ರೀತಿಗೆ ಕುಟುಂಬಸ್ಥರ ವಿರೋಧ: ಟಿಬಿ ಡ್ಯಾಂಗೆ ಹಾರಿ ಶಿಕ್ಷಕಿ ಆತ್ಮಹತ್ಯೆ!

ತುಂಗಾವಾಣಿ.
ಕೊಪ್ಪಳ: ನಾಡಿನಾದ್ಯಂತ ವಿಜಯದಶಮಿ ಹಬ್ಬದ ಸಂಭ್ರಮ ಮನೆಮಾಡಿದ್ದರೆ, ಇತ್ತ ಪ್ರೇಮ ವೈಫಲ್ಯ ಹಾಗೂ ಮದುವೆಗೆ ಕುಟುಂಬಸ್ಥರ ವಿರೋಧದಿಂದ ಮನನೊಂದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತುಂಗಭದ್ರಾ ಜಲಾಶಯದ (ಟಿಬಿ ಡ್ಯಾಂ) ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ.

ಮೃತ ಯುವತಿಯನ್ನು ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ನಿವಾಸಿ, ಸ್ಥಳೀಯ ಖಾಸಗಿ ಶಾಲೆಯ ಶಿಕ್ಷಕಿ ಸಂಗೀತಾ ಮೇಟಿ ಎಂದು ಗುರುತಿಸಲಾಗಿದೆ.
14 ವರ್ಷಗಳ ಪ್ರೇಮಕ್ಕೆ ಎದುರಾಯ್ತು ವಿಘ್ನ,
ಸಂಗೀತಾ ಮೇಟಿ ಅವರು ತಮ್ಮ ಸಂಬಂಧಿಕ ವಿಕಾಸ್ ಕೊಪ್ಪದ್ ಎಂಬಾತನನ್ನು ಕಳೆದ ಸುಮಾರು 14 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿ ವಿಚಾರ ಉಭಯ ಕುಟುಂಬಗಳಿಗೂ ತಿಳಿದಿತ್ತು. ಆದರೆ ಮದುವೆ ಮಾತುಕತೆ ಬಂದಾಗ ವಿಕಾಸ್ ಮನೆಯಲ್ಲಿ ತೀವ್ರ ವಿರೋಧ ಹಾಗೂ ಗೊಂದಲಗಳು ಶುರುವಾಗಿದ್ದವು ಎನ್ನಲಾಗಿದೆ. ಮುಖ್ಯವಾಗಿ ವಿಕಾಸ್‌ನ ಸಹೋದರ ವಸಂತ್ ಕೊಪ್ಪದ್ ಹಾಗೂ ಆತನ ಪತ್ನಿ ರೇಣುಕಾ ಇವರ ಮದುವೆಗೆ ನಿರಂತರವಾಗಿ ಅಡ್ಡಿಪಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ ಕಳೆದ ಹಲವು ದಿನಗಳಿಂದ ಸಂಗೀತಾ ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದರು.

ಕೊಪ್ಪಳಕ್ಕೆಂದು ಹೋದವಳು ಶವವಾಗಿ ಪತ್ತೆ:
ನಿನ್ನೆ ಮುಂಜಾನೆ ಮನೆಯಲ್ಲಿ "ಕೊಪ್ಪಳ ನಗರಕ್ಕೆ ಹೋಗಿ ಬರುತ್ತೇನೆ" ಎಂದು ಹೇಳಿ ಹೊರಟಿದ್ದ ಸಂಗೀತಾ, ಸಂಜೆಯಾದರೂ ಮನೆಗೆ ಮರಳಿರಲಿಲ್ಲ. ಆತಂಕಗೊಂಡ ಪೋಷಕರು ಹುಡುಕಾಟ ನಡೆಸುತ್ತಿದ್ದ ಬೆನ್ನಲ್ಲೇ, ಇಂದು ಬೆಳಗ್ಗೆ ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಆಕೆಯ ಮೃತದೇಹ ತೇಲುತ್ತಿರುವುದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಡೆತ್‌ನೋಟ್‌ನಲ್ಲಿ ಆಕ್ರೋಶ –ಮೂವರಿಗೆ ಗಲ್ಲು ಶಿಕ್ಷೆಗೆ ಆಗ್ರಹ:
ಆತ್ಮಹತ್ಯೆಗೂ ಮುನ್ನ ಸಂಗೀತಾ ಅವರು ವಿಸ್ತೃತ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ತಮ್ಮ ಪ್ರೇಮ ವೈಫಲ್ಯದ ನೋವನ್ನು ಹಂಚಿಕೊಂಡಿದ್ದು, "ತಮ್ಮ ಸಾವಿಗೆ ವಿಕಾಸ್ ಕೊಪ್ಪದ್, ಆತನ ಸಹೋದರ ವಸಂತ್ ಕೊಪ್ಪದ್ ಹಾಗೂ ಆತನ ಪತ್ನಿ ರೇಣುಕಾ ನೇರ ಕಾರಣ" ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೆ, ತನ್ನ ಸಾವಿಗೆ ಕಾರಣರಾದ ಈ ಮೂವರಿಗೂ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಡೆತ್‌ನೋಟ್ ವಶಕ್ಕೆ ಪಡೆದುಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹಬ್ಬದ ದಿನವೇ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ, ಬದುಕು ಅಮೂಲ್ಯವಾದದ್ದು
​ಜೀವನದಲ್ಲಿ ಎದುರಾಗುವ ನೋವು, ಪ್ರೇಮ ವೈಫಲ್ಯ, ಕೌಟುಂಬಿಕ ಬಿಕ್ಕಟ್ಟು ಅಥವಾ ನಿರಾಶೆಗಳು ಎಷ್ಟೇ ದೊಡ್ಡದಾಗಿದ್ದರೂ ಅವು ತಾತ್ಕಾಲಿಕ. ಯಾವುದೇ ಸಮಸ್ಯೆಗೆ ಪ್ರಾಣ ಕಳೆದುಕೊಳ್ಳುವುದು ಉತ್ತರವಲ್ಲ. ಮನಸ್ಸು ವಿಚಲಿತಗೊಂಡಾಗ ಅಥವಾ ತೀವ್ರ ಖಿನ್ನತೆ ಆವರಿಸಿದಾಗ ಆಪ್ತರೊಂದಿಗೆ, ಕುಟುಂಬಸ್ಥರೊಂದಿಗೆ ಮುಕ್ತವಾಗಿ ಮಾತನಾಡಿ ಇಲ್ಲವೇ ಆಪ್ತಸಮಾಲೋಚಕರ ನೆರವು ಪಡೆಯಿರಿ. ನಿಮ್ಮ ಬದುಕನ್ನು ಪ್ರೀತಿಸುವವರು ಹಲವರಿದ್ದಾರೆ, ಒಂದು ಕ್ಷಣದ ಸಂಯಮ ಇಡೀ ಬದುಕನ್ನು ಉಳಿಸಬಲ್ಲದು.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize