Tunganews

ಗಂಗಾವತಿ ಮೂಲದ ಬ್ಯಾಂಕ್ ಮ್ಯಾನೇಜರ್‌ನಿಂದ ಲಕ್ಷಾಂತರ ರೂ. ಗೋಲ್‌ಮಾಲ್: ಕುಷ್ಟಗಿಯಲ್ಲಿ ಎಫ್‌ಐಆರ್ ದಾಖಲು

ಗಂಗಾವತಿ ಮೂಲದ ಬ್ಯಾಂಕ್ ಮ್ಯಾನೇಜರ್‌ನಿಂದ ಲಕ್ಷಾಂತರ ರೂ. ಗೋಲ್‌ಮಾಲ್: ಕುಷ್ಟಗಿಯಲ್ಲಿ ಎಫ್‌ಐಆರ್ ದಾಖಲು

ತುಂಗಾವಾಣಿ.
ಗಂಗಾವತಿ / ಕುಷ್ಟಗಿ:
ಗಂಗಾವತಿ ತಾಲೂಕಿನ ನಿವಾಸಿಯೊಬ್ಬರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ಸರ್ಕಾರ ಹಾಗೂ ಸಾರ್ವಜನಿಕರ ಹಣವನ್ನು ಅಕ್ರಮವಾಗಿ ಲಪಟಾಯಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ.

ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ನಿವಾಸಿ ರಂಗನಾಥ ತಲತೋಟಿ ಆರೋಪಿಯಾಗಿದ್ದು, ಈತನ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಖಾಸಗಿ ಖಾತೆಗಳಿಗೆ ಹಣ ವರ್ಗಾವಣೆ:
ಆರೋಪಿ ರಂಗನಾಥ ತಲತೋಟಿ ಕುಷ್ಟಗಿಯ ಮಾರುತಿ ಸರ್ಕಲ್ ಎಸ್‌ಬಿಐ ಶಾಖೆಯಲ್ಲಿ ಶಾಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕರ್ತವ್ಯಲೋಪ ಹಾಗೂ ನಂಬಿಕೆದ್ರೋಹ ಎಸಗಿದ್ದಾರೆ. 2025ರ ಜುಲೈ 24 ರಿಂದ ಅಕ್ಟೋಬರ್ 21ರ ಅವಧಿಯಲ್ಲಿ ಸರ್ಕಾರದ ಮತ್ತು ಗ್ರಾಹಕರ ಖಾತೆಗಳಿಂದ ನಿಯಮಬಾಹಿರವಾಗಿ ಒಟ್ಟು ₹1,27,994.72 ಹಣವನ್ನು ಕಡಿತ ಮಾಡಿದ್ದರು. ಇದರಲ್ಲಿ ₹13,986.32 ಹಣವನ್ನು ಸರ್ಕಾರದ ಆಂತರಿಕ ಖಾತೆಗೆ ಮರು ಜಮಾ ಮಾಡಿದ್ದರೂ, ಬಾಕಿ ಉಳಿದ ₹1,14,008.40 ಮೊತ್ತವನ್ನು ತನ್ನ, ಪತ್ನಿಯ ಹಾಗೂ ಇತರರ ವೈಯಕ್ತಿಕ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ವಂಚನೆ ಎಸಗಿರುವುದು 
ಲೆಕ್ಕಪರಿಶೋಧನೆಯಲ್ಲಿ ಸಾಬೀತಾಗಿದೆ.

ಅಮಾನತು ಬಳಿಕ ಹಣ ವಾಪಸ್:
ಬ್ಯಾಂಕಿನ ಆಂತರಿಕ ತನಿಖೆಯಲ್ಲಿ ಗೋಲ್‌ಮಾಲ್ ಬಯಲಾಗುತ್ತಿದ್ದಂತೆ, 2026ರ ಏಪ್ರಿಲ್ 4ರಂದು ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತುತಪ್ಪಿನ ಅರಿವಾದ ಬಳಿಕ ಆರೋಪಿಯು ಏಪ್ರಿಲ್ 30ರಂದು ದುರುಪಯೋಗಪಡಿಸಿಕೊಂಡಿದ್ದ ₹1,14,008.40 ಮೊತ್ತವನ್ನು ಡಿ.ಡಿ. ಮೂಲಕ ಬ್ಯಾಂಕ್‌ಗೆ ಮರುಪಾವತಿಸಿದ್ದಾನೆ.

ಆದರೆ, ಬ್ಯಾಂಕ್ ಅಧಿಕಾರಿಯ ನಂಬಿಕೆದ್ರೋಹ ಹಾಗೂ ಆರ್ಥಿಕ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ಉನ್ನತಾಧಿಕಾರಿಗಳು ಕಠಿಣ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸಪೇಟೆ ಮೂಲದ ಬ್ಯಾಂಕ್ ಅಧಿಕಾರಿ ಸೈಯದ್ ಕೆ.ಎಚ್. ಅವರು ನೀಡಿದ ದೂರಿನ ಮೇರೆಗೆ ಕುಷ್ಟಗಿ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize