Tunganews

ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!

ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!

ತುಂಗಾವಾಣಿ.
ಕೊಪ್ಪಳ: ನಗರದ ಹೋಟೆಲ್‌ಗಳಲ್ಲಿ ಅಸ್ವಚ್ಛತೆ ಹಾಗೂ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಬಳಕೆ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಬರೋಬ್ಬರಿ 12 ಹೋಟೆಲ್‌ಗಳ ಮಾಲೀಕರಿಗೆ ಒಟ್ಟು ₹2.45 ಲಕ್ಷ ದಂಡ ವಿಧಿಸಿ ಬಿಸಿ ಮುಟ್ಟಿಸಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಆಗಸ್ಟ್‌ ಕೊನೆಯ ವಾರದಲ್ಲಿ ಜಿಲ್ಲಾ ಕೇಂದ್ರದ ಪ್ರಮುಖ ಹೋಟೆಲ್‌ಗಳ ಮೇಲೆ ದಿಢೀರ್‌ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಈ ವೇಳೆ ಕೊಳಕಾದ ಫ್ರಿಡ್ಜ್‌, ಕೊಳೆತ ತರಕಾರಿ, ಕೃತಕ ಬಣ್ಣ ಬೆರೆಸಿದ ಮತ್ತು ಗುಣಮಟ್ಟವಿಲ್ಲದ ಆಹಾರ ಸಾಮಗ್ರಿಗಳು ಪತ್ತೆಯಾಗಿದ್ದವು. ನಿಯಮ ಉಲ್ಲಂಘಿಸಿದ ಹೋಟೆಲ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪ್ರಮುಖ ಹೋಟೆಲ್‌ಗಳಲ್ಲೇ ಲೋಪ:
ತಪಾಸಣೆ ವೇಳೆ ಮಾಲತೇಶ ಹೋಟೆಲ್, ಅಕ್ಷಯ ಹೋಟೆಲ್, ಉಡುಪಿ ಉಪಹಾರ, ಜಿ.ಕೆ.ಎಸ್. ಹೋಟೆಲ್, ಹಂಪಿ ಎಕ್ಸ್‌ಪ್ರೆಸ್‌ ಕೆಫೆ, ಸಂಧ್ಯಾ ಸೇರಿದಂತೆ ನಗರದ ಹಲವು ಹೋಟೆಲ್‌ಗಳಲ್ಲಿ ಅವಧಿ ಮೀರಿದ ತಂಪು ಪಾನೀಯ, ಕಾಫಿ ಪುಡಿ ಪ್ಯಾಕೆಟ್‌ಗಳು, ಬ್ರೆಡ್‌ ಹಾಗೂ ಬರೋಬ್ಬರಿ 4 ಕೆ.ಜಿ. ಅವಧಿ ಮೀರಿದ ಉಪ್ಪಿನಕಾಯಿ ಪತ್ತೆಯಾಗಿತ್ತು. ಅಡುಗೆ ಮನೆಯಲ್ಲಿ ಕನಿಷ್ಠ ಸ್ವಚ್ಛತೆಯೂ ಇರಲಿಲ್ಲ.

ಲೇಬಲ್‌ ನಿಯಮಕ್ಕೂ ಡೋಂಟ್‌ ಕೇರ್‌:
ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡುವ ಸಿಹಿ ಮತ್ತು ಖಾರದ ಪ್ರಮಾಣದ ಬಗ್ಗೆ ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡಬೇಕೆಂಬ ನಿಯಮವನ್ನು ಗಾಳಿಗೆ ತೂರಲಾಗಿತ್ತು. ಜತೆಗೆ, ಅಡುಗೆಗೆ ಬಳಸುವ ಕಚ್ಚಾ ಸಾಮಗ್ರಿಗಳ ಮೇಲೆ ತಯಾರಿಕಾ ದಿನಾಂಕ ಹಾಗೂ ಬಳಕೆಯ ಅಂತಿಮ ದಿನಾಂಕದ (Expiry Date) ಲೇಬಲ್‌ಗಳೇ ಇರಲಿಲ್ಲ ಎಂಬುದು ಅಧಿಕಾರಿಗಳ ಪರಿಶೀಲನೆಯಲ್ಲಿ ದೃಢಪಟ್ಟಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ನ್ಯಾಯನಿರ್ಣಯದ ಅಧಿಕಾರ ಹೊಂದಿರುವ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಸಿದ್ರಾಮೇಶ್ವರ ಅವರು ಪ್ರಕರಣಗಳ ವಿಚಾರಣೆ ನಡೆಸಿ, ನಿಯಮ ಉಲ್ಲಂಘಿಸಿದ ಪ್ರತಿಯೊಂದು ಹೋಟೆಲ್‌ಗೆ ₹20 ಸಾವಿರದಿಂದ ₹30 ಸಾವಿರದವರೆಗೆ ದಂಡ ವಿಧಿಸಿ ಆದೇಶಿಸಿದ್ದಾರೆ.

ತಪ್ಪು ಮರುಕಳಿಸಿದರೆ ಲೈಸೆನ್ಸ್‌ ರದ್ದು!
 "ಅಸ್ವಚ್ಛತೆ ಹಾಗೂ ಅವಧಿ ಮೀರಿದ ವಸ್ತುಗಳನ್ನು ಬಳಸಿದ ಕಾರಣಕ್ಕೆ ಕೊಪ್ಪಳದ 12 ಹೋಟೆಲ್‌ಗಳಿಗೆ ದಂಡ ವಿಧಿಸಲಾಗಿದೆ. ಅಧಿಕಾರಿಗಳು ನಿರಂತರ ನಿಗಾ ವಹಿಸಲಿದ್ದಾರೆ. ಹೋಟೆಲ್‌ ಮಾಲೀಕರು ಇನ್ನು ಮುಂದೆ ಇಂತಹ ತಪ್ಪುಗಳನ್ನು ತಿದ್ದಿಕೊಳ್ಳುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ಇದೇ ಲೋಪಗಳು ಪುನರಾವರ್ತನೆಯಾದರೆ ನಿರ್ದಾಕ್ಷಿಣ್ಯವಾಗಿ ಹೋಟೆಲ್ ಪರವಾನಗಿ ರದ್ದುಪಡಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize