Tunganews

ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ

Nov 04, 2026, 10:00 PM IST
ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ

 

ತುಂಗಾವಾಣಿ.
ಗಂಗಾವತಿ: ಚಿಕ್ಕಬೆಣಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಇಂದಿರಾ ಅವರ ಸರ್ವಾಧಿಕಾರಿ ಧೋರಣೆ, ಸಿಬ್ಬಂದಿಗೆ ಮಾನಸಿಕ ಕಿರುಕುಳ ಹಾಗೂ ತಾರತಮ್ಯ ನೀತಿಯನ್ನು ಖಂಡಿಸಿ ಗಂಗಾವತಿ ತಾಲೂಕಿನ ಸಮಸ್ತ ಗ್ರಾಮ ಪಂಚಾಯಿತಿ ಸಿಬ್ಬಂದಿ ಬುಧವಾರ ತಾಲೂಕು ಪಂಚಾಯಿತಿ ಕಚೇರಿ ಎದುರು ಬೃಹತ್ ಸಾಂಕೇತಿಕ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯನ್ನುದ್ದೇಶಿಸಿ ಗಂಭೀರ ಆರೋಪಗಳನ್ನು ಮಾಡಿದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ (ಸಿಐಟಿಯು ಸಂಯೋಜಿತ) ರಾಜ್ಯಾಧ್ಯಕ್ಷ ಎಂ.ಬಿ. ನಾಡಗೌಡ, "ಚಿಕ್ಕಬೆಣಕಲ್ ಪಿಡಿಒ ಇಂದಿರಾ ಅವರ ಕಿರುಕುಳ ಹಾಗೂ ಧೋರಣೆಯೇ ಇಂದು ತಾಲೂಕಿನ ಎಲ್ಲಾ ಸಿಬ್ಬಂದಿ ಭಿನ್ನಾಭಿಪ್ರಾಯ ಮರೆತು ಒಂದಾಗುವಂತೆ ಮಾಡಿದೆ. ಈ ನಿಟ್ಟಿನಲ್ಲಿ ನಮ್ಮನ್ನು ಒಗ್ಗೂಡಿಸಿದ್ದಕ್ಕೆ ಅವರಿಗೆ ಧನ್ಯವಾದ ಹೇಳಬೇಕು" ಎಂದು ತೀವ್ರವಾಗಿ ವ್ಯಂಗ್ಯವಾಡಿದರು.

ಸಿಬ್ಬಂದಿ ನಡುವೆ ಒಡಕು ಮೂಡಿಸುವ ಹುನ್ನಾರ:
"ಪಿಡಿಒ ಮಹಿಳೆಯಾಗಿ ಸಿಬ್ಬಂದಿಯನ್ನು ಸಮಾನ ದೃಷ್ಟಿಯಿಂದ ಕಾಣುವ ಬದಲು, ಒಬ್ಬರ ವಿರುದ್ಧ ಇನ್ನೊಬ್ಬರನ್ನು ಎತ್ತಿಕಟ್ಟಿ ನೌಕರರ ಮಧ್ಯೆ ಒಡಕು ಮೂಡಿಸುತ್ತಿದ್ದಾರೆ. ಜನರಿಂದ ಅಕ್ರಮವಾಗಿ ಹಣ ವಸೂಲಿ ಮಾಡಿಕೊಡುವವರಿಗೆ ಮಣೆ ಹಾಕಿ, ಕೇಳಿದಷ್ಟು ವಸೂಲಿ ಮಾಡಿಕೊಡದ ಪ್ರಾಮಾಣಿಕ ನೌಕರರನ್ನು ಮೂಲೆಗುಂಪು ಮಾಡಿ ಸತಾಯಿಸುವುದೇ ಇವರ ನಿತ್ಯದ ಕಾಯಕವಾಗಿದೆ" ಎಂದು ನಾಡಗೌಡ ಕಿಡಿಕಾರಿದರು.

"ಪಿಡಿಒ ಇಂದಿರಾ ಅವರು ಈ ಹಿಂದೆ ಕರ್ತವ್ಯ ನಿರ್ವಹಿಸಿದ ಕಡೆಗಳಲ್ಲೂ ಸಾಕಷ್ಟು ಕಾನೂನುಬಾಹಿರ ಕೃತ್ಯಗಳನ್ನು ಎಸಗಿದ್ದಾರೆ. ನಿಯಮಾವಳಿ ಪ್ರಕಾರ ಒಂದು ಎಕರೆ ಒಳಗಿನ ಜಮೀನಿಗೆ ಮಾತ್ರ ತಾಪಂ ಹಾಗು ಪಿಡಿಒ ಹಂತದಲ್ಲಿ ಪರಿಶೀಲನೆಗೆ ಅವಕಾಶವಿದ್ದರೂ, ಇವರು 7-8 ಎಕರೆ ಜಮೀನಿನ ಕೃಷಿಯೇತರ (ಎನ್.ಎ) ಮ್ಯುಟೇಷನ್‌ಗಳನ್ನು ಕಾನೂನುಬಾಹಿರವಾಗಿ ಖಾತೆ ಹಂಚಿಕೆ ಮಾಡಿದ್ದಾರೆ. ಇವರ ಇಂತಹ ಅಕ್ರಮಗಳ ವಿರುದ್ಧ ಈಗಾಗಲೇ ಲೋಕಾಯುಕ್ತದಲ್ಲೂ ಪ್ರಕರಣಗಳು ದಾಖಲಾಗಿವೆ. ತಮ್ಮ ಇಂತಹ ಕಾನೂನುಬಾಹಿರ ಕೆಲಸಗಳಿಗೂ ಸಿಬ್ಬಂದಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ" ಎಂದು ಆಪಾದಿಸಿದರು.

ದ್ವೇಷದ ಅಮಾನತು, ಮಹಿಳಾ ಚಾಲಕಿಗೆ ವೇತನ ತಡೆಹಿಡಿತ:
ಚಿಕ್ಕಬೆಣಕಲ್‌ನಲ್ಲಿ 2023ರ ಹಳೆಯ ನೋಟಿಸ್ ಉಲ್ಲೇಖಿಸಿ ಹಾಗು ಒಂದೇ ತಿಂಗಳಲ್ಲಿ ಸುಮಾರು ಹನ್ನಂದಕ್ಕೂ ಹೆಚ್ಚು ನೋಟೀಸ್‌ಗಳನ್ನು  ಸಿಬ್ಬಂದಿಯೊಬ್ಬರನ್ನು ಏಕಾಏಕಿ ಅಮಾನತುಗೊಳಿಸಿ ಸೇಡು ತೀರಿಸಿಕೊಳ್ಳಲಾಗಿತ್ತು. ನಂತರ ತಾಲೂಕಿನ ಎಲ್ಲಾ ಸಿಬ್ಬಂದಿ ಒಗ್ಗಟ್ಟಾಗಿ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಅಮಾನತು ಆದೇಶವನ್ನು ಹಿಂಪಡೆದಿದ್ದಾರೆ. ಇದೇ ವೇಳೆ ಸ್ವಚ್ಛತಾ ವಾಹಿನಿಯ ಮಹಿಳಾ ಚಾಲಕಿಗೆ ಬರೋಬ್ಬರಿ 16 ತಿಂಗಳುಗಳ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು.

ರಜೆ ದಿನಗಳಲ್ಲೂ ಜೀತದಾಳುಗಳಂತೆ ದುಡಿತ:
ಸರ್ಕಾರಿ ರಜೆ ದಿನಗಳಲ್ಲೂ ಕೆಲಸಕ್ಕೆ ಕರೆಸಿ ಕುಟುಂಬದೊಂದಿಗೆ ಕಾಲ ಕಳೆಯಲು ಬಿಡುತ್ತಿಲ್ಲ. ವಾಟರ್‌ಮ್ಯಾನ್‌ಗಳು ನಿಯಮಾನುಸಾರ ರಜೆ ಪಡೆದರೆ, ಸ್ವಂತ ಖರ್ಚಿನಲ್ಲಿ ಬದಲಿ ಆಳನ್ನು ಇಟ್ಟುಕೊಳ್ಳುವಂತೆ ಪೀಡಿಸಲಾಗುತ್ತಿದೆ. ಈ ಕಿರುಕುಳ, ತಾರತಮ್ಯ ಹಾಗೂ ಕನಿಷ್ಠ ವೇತನ ವಂಚನೆಯನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಸರಬರಾಜು ಸೇರಿದಂತೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.
ಬಳಿಕ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ಮಹಾಂತಗೌಡ ಇವರಿಗೆ 17 ಪ್ರಮುಖ ಬೇಡಿಕೆಗಳ ಲಿಖಿತ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ. ಪ್ರಧಾನ ಕಾರ್ಯದರ್ಶಿ ಮಾರುತಿ ಹೂಗಾರ, ಕಾಯಕಮಿತ್ರ ಅಧ್ಯಕ್ಷೆ ಮಾಲಾ ಡಣಾಪುರ, ಸೇರಿದಂತೆ ತಾಲೂಕು ಸಮಿತಿಯ ಸರ್ವ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Nov 16 2026 7:38PM | ಅಪರಾಧ | - ಗಂಗಾವತಿ: ಮಧ್ಯರಾತ್ರಿಯ ಆಪರೇಷನ್, ಬೆಳಗಾಗುವುದರೊಳಗೆ ‘ಸೆಟಲ್‌ಮೆಂಟ್’? ತಹಶೀಲ್ದಾರ್ ಸಾಹೇಬರೇ, ಮರಳು ಮಾಫಿಯಾ ಮುಂದೆ ಕಾನೂನು ಮಂಡಿಯೂರಿತೇ?
Nov 4 2026 10:00PM | ರಾಜ್ಯ | ಗಂಗಾವತಿ ಚಿಕ್ಕಬೆಣಕಲ್ ಪಿಡಿಒ ಕಿರುಕುಳಕ್ಕೆ ಸಿಡಿದೆದ್ದ ಗ್ರಾ.ಪಂ ಸಿಬ್ಬಂದಿ: ತಾ.ಪಂ ಮುಂದೆ ಸಾಂಕೇತಿಕ ಧರಣಿ
Nov 3 2026 12:24PM | ಅಪರಾಧ | - ಕೊಪ್ಪಳ: ಬಡತನ ಮೆಟ್ಟಿ ನಿಂತ ವೈದ್ಯ ವಿದ್ಯಾರ್ಥಿಗೆ ವಂಚನೆಯ ಶಾಕ್: ರಾಯರ ಮಠದ ಹೆಸರಲ್ಲಿ ಬಲೆ ಬೀಸಿದ ಖದೀಮರು
Nov 2 2026 12:16PM | ಅಪರಾಧ | - ಗಿಣಿಗೇರಾ ಬಳಿ ಭೀಕರ ಅಪಘಾತ: ಗಂಗಾವತಿಯ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ!
Oct 31 2026 11:35AM | ಅಪರಾಧ | - ಕಾರಟಗಿ ವಿದ್ಯಾರ್ಥಿಗಳ ‘ಕಿಡ್ನ್ಯಾಪ್’ ಕಥೆಗೆ ಬಿಗ್ ಟ್ವಿಸ್ಟ್: ಅಪಹರಣದ ಅಸಲಿ ಕಥೆ ಕಟ್ಟಿದ್ದು ಯಾರು? ಮಕ್ಕಳ ರೋಚಕ ಪಯಣದ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...
Oct 31 2026 8:12AM | ಅಪರಾಧ | - ಖಾಕಿ ಬಲೆಗೆ ಬಿದ್ದ ಗಂಗಾವತಿಯ ಖತರ್ನಾಕ್ ಕಳ್ಳ: ₹4.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ!
Oct 29 2026 5:50PM | ರಾಜ್ಯ | - ಕನಕಗಿರಿ: ಸಚಿವರ ಕ್ಷೇತ್ರದಲ್ಲೇ ನಾರುತ್ತಿದೆ ‘ಸ್ವಚ್ಛ ಭಾರತ’ದ ಬಂಡವಾಳ! ಹೊಸಕೇರಾ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರಿನ ಸಾಮ್ರಾಜ್ಯ: ಪಂಚಾಯತಿ ಕಣ್ಣೆದುರೇ ಸಾವಿರಾರು ಗ್ರಾಮಸ್ಥರ ನರಕಯಾತನೆ
Oct 23 2026 10:27PM | ಅಪರಾಧ | - ಕೊಪ್ಪಳದ 12 ಹೋಟೆಲ್‌ಗಳಿಗೆ ₹2.45 ಲಕ್ಷ ದಂಡ!
Oct 23 2026 10:44AM | ಅಪರಾಧ | - ಕೊಪ್ಪಳ: ನೌಕರರ ಸಂಘದ ಗ್ರೂಪ್‌ನಲ್ಲಿ ಹರಿದಾಡಿದ ಮೋಸದ ಲಿಂಕ್‌ ಫೈಲ್‌ ಡೌನ್‌ಲೋಡ್ ಬೆನ್ನಲ್ಲೇ ಮೊಬೈಲ್‌ ಹ್ಯಾಕ್‌, ನಂಬರ್‌ ಬ್ಲಾಕ್‌, ₹2 ಲಕ್ಷ ಗುಳುಂ!
Oct 22 2026 8:05PM | ಅಪರಾಧ | - ಕೊಪ್ಪಳ: ಪ್ರೀತಿಸಿ ಕೈಕೊಟ್ಟಿದ್ದ ಪ್ರಿಯಕರ ಸೇರಿ ಮೂವರ ಬಂಧನ.!




Copyright © 2026 ತುಂಗವಾಣಿ ನ್ಯೂಸ್. All Rights Reserved.
Designed & Developed by We Make Digitize